ಕೋಟ : ಧರ್ಮಸ್ಥಳ ಶಾಂತಿವನ ಟ್ರಸ್ಟ್ ಇವರು ಆಯೋಜಿಸಿದ್ದ ರಾಜ್ಯಮಟ್ಟದ ಜ್ಞಾನದರ್ಶನಿ ಪ್ರಸ್ತತಾಧಾರಿತ ಸ್ಪರ್ಧೆಯಲ್ಲಿ ಕೋಟದ ಗಿಳಿಯಾರು ಶ್ರೀ ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಕುಮಾರಿ ಅನ್ವಿತಾ ಶೆಟ್ಟಿ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರು ಅಭಿನಂದಿಸಿದ್ದಾರೆ.