ಬಂಟ್ವಾಳ : ಸಿಡಿಲು ಬಡಿದು ಬಾಲಕ ಮೃತಪಟ್ಟ ಘಟನೆ ಭಾನುವಾರ ಸಂಜೆ ಕೆದಿಲ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮುರಿಯಾಜೆ ನಿವಾಸಿ ಚಂದ್ರಹಾಸ ಎಂಬವರ ಪುತ್ರ, ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ ವಿದ್ಯಾರ್ಥಿ ಸುಭೋದ್ (14) ಮೃತಪಟ್ಟ ಬಾಲಕ
ಭಾನುವಾರ ಸಂಜೆ 5.30ರ ಸುಮಾರಿಗೆ ಮನೆಯ ಸಿಟೌಟ್ ನಲ್ಲಿ ಕುಳಿತ್ತಿದ್ದ ವೇಳೆ ಸಿಡಿಲು ಬಡಿದಿದ್ದು ತೀವ್ರ ಅಸ್ವಸ್ಥಗೊಂಡಿದ್ದ ಸುಭೋದ್ ನನ್ನು ತಕ್ಷಣ ಮನೆಯವರು ಮಾಣಿಯ ಆಸ್ಪತ್ರೆಯೊಂದಕ್ಕೆ ಕರೆತಂದರು ಅಲ್ಲಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.