Home » ಕುಮಾರಧಾರಾ ನದಿ : ಸ್ನಾನಘಟ್ಟ ಮುಳುಗಡೆ
 

ಕುಮಾರಧಾರಾ ನದಿ : ಸ್ನಾನಘಟ್ಟ ಮುಳುಗಡೆ

by Kundapur Xpress
Spread the love

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾದ ಪರಿಣಾಮ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ಸೋಮವಾರ ಸ್ನಾನಘಟ್ಟ ಮುಳುಗಡೆಯಾಗಿದೆ.

ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಿಂದ ಕುಮಾರಧಾರ ಉಕ್ಕಿ ಹರಿಯುತ್ತಿದ್ದು, ಸ್ನಾನಘಟ್ಟದ ಭಕ್ತರ ಶೌಚ ಗೃಹ, ಭಕ್ತರ ಲಗೇಜ್ ಕೊಠಡಿಯೂ ಭಾಗಶಃ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ-ಪುತ್ತೂರು-ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಹರಿಯುತ್ತಿರುವ ನದಿ ನೀರಿನಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ.

ಭಾನುವಾರ ರಾತ್ರಿಯಿಂದ ನಿರಂತರ ಧಾರಾಕಾರ ಮಳೆ ಆರಂಭಗೊಂಡಿದ್ದು ಸೋಮವಾರ ಬೆಳಗ್ಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಿರುವ ಹಿನ್ನಲೆಯಲ್ಲಿ ನದಿ ನೀರಿಗೆ ಇಳಿಯಲು ನಿರ್ಬಂಧಿಸಲಾಗಿದ್ದು, ನದಿ ದಡದಲ್ಲಿ ಡ್ರಮ್ ಗಳಲ್ಲಿ ನೀರು ಸಂಗ್ರಹಿಸಿ ಭಕ್ತರಿಗೆ ತೀರ್ಥ ಸ್ನಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕುಮಾರಧಾರ ಸ್ನಾನಘಟ್ಟ ಪ್ರದೇಶದಲ್ಲಿ ಭಕ್ತರು ನದಿ ನೀರಿನ ಬಳಿ ತೆರಳದಂತೆ ಎಚ್ಚರ ವಹಿಸಲು ಹಾಗೂ ಮುಂಜಾಗ್ರತಾ ದೃಷ್ಟಿಯಿಂದ ಹೋಮ್ ಗಾರ್ಡ್ ಹಾಗೂ ದೇವಸ್ಥಾನದ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.

ಸೋಮವಾರ ದ ದಿನವಿಡೀ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಧಾರಕಾರ ಮಳೆಯಾಗಿದ್ದು ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ, ದರ್ಪಣ ತೀರ್ಥ ನದಿಗಳು ಸೇರಿಸಿ ಪರಿಸರದ ನದಿ, ಹೊಳೆ, ತೋಡುಗಳು ತುಂಬಿ ಹರಿಯುತ್ತಿವೆ. ಸುಬ್ರಹ್ಮಣ್ಯ ಪೇಟೆ, ಬಳ್ಳ, ಯೇನೆಕಲ್ಲು, ಬಿಳಿನೆಲೆ, ಕೈಕಂಬ, ಕುಲ್ಕುಂದ, ಐನೆಕಿದು ಪರಿಸದಲ್ಲೂ ನಿರಂತರ ಮಳೆಯಾಗಿದೆ ಎಂಧು ತಿಳಿದುಬಂದಿದೆ

   

Related Articles

error: Content is protected !!