ಉಡುಪಿ : ಮುಂಬೈಯ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಊರಿಗೆ ಆಗಮಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಾಗಿಲು ಪೆರಂಪಳ್ಳಿಯ ಕಕ್ಕಿಂಜೆ ದೇವಿನಗರದಲ್ಲಿ ನಡೆದಿದೆ 51 ವರ್ಷ ಪ್ರಾಯದ ವಿವಾಹಿತರಾದ ಸುಕೇಶ್ ಶೆಟ್ಟಿ ಎಂಬವರು ರಾತ್ರಿ ಹೊತ್ತಿನಲ್ಲಿ ಮನೆಗೆ ಬಂದು ಹೊರಗಡೆ ಬಟ್ಟೆ ಒಗೆಯುವ ಸ್ಥಳದಲ್ಲಿ ಕಬ್ಬಿಣದ ಪೈಪ್ ಗೆ ಹಗ್ಗ ಕಟ್ಟಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ