ಕಾರ್ಕಳ: ಮಹಿಳೆಯೋರ್ವರು ತಾವು ಕಾರ್ಯ ನಿರ್ವಹಿಸುವ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಕಾರ್ಕಳ ಮಾರ್ಕೆಟ್ ರಸ್ತೆಯಲ್ಲಿ ಸಂಭವಿಸಿದೆ
ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪ್ರಮೀಳಾ (30) ಎಂದು ಗುರುತಿಸಲಾಗಿದೆ. ಪ್ರಮೀಳಾ ಅವರು ಕಾರ್ಕಳ ಮಾರ್ಕೆಟ್ ರೋಡ್ ಬಳಿಯ ಖಾಸಗಿ ಸಹಕಾರಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು ಶುಕ್ರವಾರ ಬೆಳಿಗ್ಗೆ ಬೆಳಗ್ಗೆ ಕಚೇರಿಗೆ ಬಂದವರೇ ಫ್ಯಾನ್ಗೆ ಶಾಲು ಮೂಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಕಾರ್ಕಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.