407
ಉಡುಪಿ: ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡ ಹಾಗೂ ಶಾರದಾ ಇಂಟರ್ ನ್ಯಾಷನಲ್ ಹೋಟೆಲ್ ಇದರ ಮಾಲಕರಾದ ಬಿ.ಸುಧಾಕರ್ ಶೆಟ್ಟಿಯವರು ಇಂದು ಇಂದು ಬೆಳಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು ಅವರಿಗೆ 72 ವರ್ಷ ವಯಸ್ಸಾಗಿತ್ತು
ಸುಧಾಕರ್ ಶೆಟ್ಟಿ ಹಲವು ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸುತ್ತಿದ್ದರು. 2009 ರಿಂದ 2012 ರವರೆಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 1999 ರಲ್ಲಿ ಯು.ಆರ್.ಸಭಾಪತಿ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದರು ಅವರ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ ವ್ಯಕ್ತಪಡಿಸಿದೆ

