Home » ಶೃಂಗೇರಿ ಶ್ರೀಗಳಿಂದ ಅಕ್ಷರಾಭ್ಯಾಸ, ಸುವಿದ್ಯಾರಂಭ
 

ಶೃಂಗೇರಿ ಶ್ರೀಗಳಿಂದ ಅಕ್ಷರಾಭ್ಯಾಸ, ಸುವಿದ್ಯಾರಂಭ

ಸುಜ್ಞಾನ ಪಿ ಯು ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ

by Kundapur Xpress
Spread the love

ಕುಂದಾಪುರ : ಕುಂದಾಪುರದ ಯಡಾಡಿ-ಮತ್ಯಾಡಿಯಲ್ಲಿರುವ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಇವರ ಸುಜ್ಞಾನ ಪ ಪೂ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ಭಾರತೀತೀರ್ಥರ ಅನುಗ್ರಹದಿಂದ ಶ್ರೀ ವಿಧುಶೇಖರ ಭಾರತಿ ತೀರ್ಥರಿಂದ ಅಕ್ಷರಾಭ್ಯಾಸ ಮತ್ತು ಸುವಿದ್ಯಾರಂಭ, ವಾಣಿ ವಿಲಾಸ ವಿದ್ಯಾರ್ಥಿ ನಿಲಯ ಹಾಗೂ ನೂತನ ಕಟ್ಟಡವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು 

ಸ್ವಾಮೀಜಿಯವರು ವೀಣಾಧಾರಿಣಿ ಜಗನ್ಮಾತೆ ಶಾರದಾಂಬೆಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು ಹಾಗೂ ಸಂಸ್ಥೆಯ ಸುಮಾರು 1,900 ವಿದ್ಯಾರ್ಥಿಗಳಿಗೆ ಶಾಸ್ತೋಕ್ತವಾಗಿ ವಿದ್ಯಾರಂಭವನ್ನು ನೆರೆವೇರಿಸಿದರು.

ಉಡುಪಿ ಬಡಗುಬೆಟ್ಟು ಕೋ-ಆಪ ರೇಟಿವ್ ಸೊಸೈಟಿ ಇದರ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ನಿವೃತ್ತ ಪ್ರಾಂಶುಪಾಲ ಪ್ರೊ| ಎಂ.ಬಾಲಕೃಷ್ಣ ಶೆಟ್ಟಿ ಸೌಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸಬ್ಲಾಡಿ ಮಂಜಯ್ಯ ಶೆಟ್ಟಿ

ಶ್ರೀ ಶಾರದಾ ಪೀಠಂ ಶೃಂಗೇರಿ ಇದರ ಪ್ರಾಂತೀಯಧರ್ಮಾಧಿಕಾರಿ ವೇ।ಮೂ। ಲೋಕೇಶ ಅಡಿಗ ನಾವುಂದ ಬಡಾಕೆರೆ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ರಘುರಾಮ ದೇವಾಡಿಗ,ಸುಜ್ಞಾನ್ ಎಜುಕೇಷನಲ್‌ ಟ್ರಸ್ಟ್ ಕುಂದಾಪುರ ಇದರ ಅಧ್ಯಕ್ಷ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಉಪಸ್ಥಿತರಿದ್ದರು.

ಸುಜ್ಞಾನ್ ಎಜುಕೇಷನಲ್ ಟ್ರಸ್ಟ್ ಕುಂದಾಪುರ ಇದರ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದು, ಶಿಕ್ಷಕ ರಜತ ಭಟ್ ನಿರೂಪಿಸಿ, ಸುಜ್ಞಾನ ಪಿಯು ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಂಜನ್ ಬಿ ಶೆಟ್ಟಿ ಮತ್ತು ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್ ಕೆ. ವಂದಿಸಿದರು

 

Related Articles

error: Content is protected !!