ಕುಂದಾಪುರ : ನಾವೆಲ್ಲರೂ ದ್ವೇಷವನ್ನ ಬಿಟ್ಟು ಮನುಷ್ಯತ್ವಕ್ಕೆ ಹೆಚ್ಚು ಬೆಲೆ ಕೊಟ್ಟು ಪ್ರೀತಿಯಿಂದ ಬದುಕಬೇಕು ಹಾಗೂ ಪ್ರತಿಯೊಬ್ಬರು ಪ್ರೀತಿಯನ್ನು ಹಂಚಬೇಕು ( SPREAD THE LOVE ) ಮಾನವೀಯ ಮೌಲ್ಯಗಳಿಗೆ ಹೆಚ್ಚು ಮಾನ್ಯತೆ ದೊರೆಯುವ ಸಮಾಜ ನಮ್ಮದಾಗಬೇಕು .ಮಕ್ಕಳಿಗೆ ಬಾಲ್ಯದಲ್ಲಿಯೇ ಮಾನವೀಯ ಮೌಲ್ಯಗಳನ್ನು ಕಲಿಸಲು ಬೇಸಿಗೆ ಶಿಬಿರಗಳು ಹೆಚ್ಚು ಸಹಕಾರಿಯಾಗುತ್ತದೆ ಎಂದು ಖ್ಯಾತ ಚಲನಚಿತ್ರ ನಟಿ ಸಂಗೀತ ಶೃಂಗೇರಿ ನುಡಿದರು
ಇವರು ಕೋಟೇಶ್ವರ ಯಡಾಡಿ -ಮತ್ಯಾಡಿ ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಆಯೋಜಿಸಿದ ಬೇಸಿಗೆ ಶಿಬಿರ ‘ಮಂಥನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು ಪ್ರತಿಯೊಬ್ಬ ಸಾಧಕ ವ್ಯಕ್ತಿಯ ಯಶಸ್ಸಿನ ಹಿಂದೆ ಅವರ ಅವಿರತ ಶ್ರಮ ಮತ್ತು ಪ್ರಯತ್ನ ಅಡಗಿರುತ್ತದೆ. ನಾವು ಸೋಲು ಮತ್ತು ಗೆಲುವುಗಳನ್ನು ಸಮಾನ ಮನಸ್ಸಿನಿಂದ ಸ್ವೀಕರಿಸಿ ಯಶಸ್ಸು ಪಡೆಯಲು ಪ್ರಯತ್ನಿಸಿದರೆ ಸಾಧಕರಾಗಬಹುದು ಎಂದರು.
ಬೇಸಿಗೆ ಶಿಬಿರ ಮಂಥನವನ್ನು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಿದರು ಸಮಾರಂಭದಲ್ಲಿ ಸುಜ್ನಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಪ್ರಥಮ ದರ್ಜೆ ಗುತ್ತಿಗೆದಾರರಾದ ಶ್ರೀಯುತ ಅರುಣ್ ಕುಮಾರ್ ಹೆಗ್ಡೆ ಸುಜ್ನಾನ ಎಜುಕೇಶನಲ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಶ್ರೀಯುತ ಪ್ರತಾಪ್ ಶೆಟ್ಟಿ ಕೋಶಾಧಿಕಾರಿ ಶ್ರೀಯುತ ಭರತ್ ಶೆಟ್ಟಿ ಪ್ರಾಂಶುಪಾಲ ರಂಜನ್ ಬಿ ಉಪಸ್ಥಿತರಿದ್ದರು ಶಿಕ್ಷಕ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು
ಬೇಸಿಗೆ ಶಿಬಿರದಲ್ಲಿ ಒಟ್ಟು ದಾಖಲೆಯ 1064 ಶಿಬಿರಾರ್ಥಿಗಳು ಭಾಗವಹಿಸಿದರು

