ಉಡುಪಿ : ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನಲೆಯಲ್ಲಿ ಸೆಕ್ಟರ್ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿ ಉಡುಪಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಟಪಾಡಿ, ಹಂದಾಡಿ, ಕುಮ್ರಗೋಡು ಮತ್ತು ವಾರಂಬಳ್ಳಿ ಮತಗಟ್ಟೆಗಳಿಗೆ ಸೆಕ್ಟರ್ ಅಧಿಕಾರಿಯಾಗಿ ನೇಮಕಗೊಂಡಕೆ.ಪಿ. ದಯಾನಂದ ಜವಳಿ ಅವರೇ ಅಮಾನತು ಗೊಂಡವರು. ಅವರು ಚುನಾವಣಾ ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯ ವಹಿಸಿ ದುರ್ನಡತೆ ತೋರಿದ್ದಾರೆ. ಈ ಬಗ್ಗೆ ಕಾರಣ ಕೇಳಿ ನೋಟೀಸ್ ನೀಡಿದ್ದರೂ ಸಹ ಯಾವುದೇ ವಿವರಣೆ ನೀಡದೇ ಸೆಕ್ಟರ್ ಅಧಿಕಾರಿ ಕರ್ತವ್ಯಕ್ಕೆ ಹಾಜರಾಗದೇ ಬೇಜವಾಬ್ದಾರಿಯಿಂದ ವರ್ತಿಸಿರುವ ಹಿನ್ನಲೆಯಲ್ಲಿ ಜವಳಿ ಅಭಿವೃದ್ಧಿ ಆಯುಕ್ತ ಟಿ.ಎಚ್.ಎಂ. ಕುಮಾರ್, ದಯಾನಂದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.