Home » ಶಿಕ್ಷಕಿ ಸಿಸ್ಟರ್ ಪ್ರಭಾ ವಜಾ : ಪ್ರಕರಣ ಸುಖಾಂತ್ಯ
 

ಶಿಕ್ಷಕಿ ಸಿಸ್ಟರ್ ಪ್ರಭಾ ವಜಾ : ಪ್ರಕರಣ ಸುಖಾಂತ್ಯ

by Kundapur Xpress
Spread the love

ಮಂಗಳೂರು : ಹಿಂದೂ ಧರ್ಮದ ಅವಹೇಳನ ಮಾಡಿದ ಆರೋಪ ಹೊಂದಿರುವ ನಗರದ ಖಾಸಗಿ ಶಾಲೆಯ ಶಿಕ್ಷಕಿಯನ್ನು ಶಾಲಾಡಳಿತ ಮಂಡಳಿ ವಜಾಗೊಳಿಸಿದೆ. ಪೋಷಕರು ಮತ್ತು ಹಿಂದೂಪರ ಸಂಘಟನೆಗಳ ಪ್ರತಿಭಟನೆಗೆ ಮಣಿದ ಆಡಳಿತ ಮಂಡಳಿ, ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ವಜಾ ಮಾಡಿ ಆದೇಶ ಹೊರಡಿಸುವುದರೊಂದಿಗೆ ಪ್ರಕರಣ ಸುಖಾಂತ್ಯಗೊಂಡಿದೆ.

ಕೆಲ ದಿನಗಳ ಹಿಂದೆ ಶಿಕ್ಷಕಿ ಪ್ರಭಾ ಅವರು ಅಯೋಧ್ಯೆ ರಾಮಮಂದಿರ ಮತ್ತು ಶ್ರೀರಾಮ ದೇವರ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಪೋಷಕರಲ್ಲಿ ತಿಳಿಸಿದ್ದರು. ನಂತರ ಇದು ವಿವಾದದ ಸ್ವರೂಪ ಪಡೆದುಕೊಂಡಿದ್ದು, ಹಿಂದೂ ಸಂಘಟನೆಗಳು, ರಾಜಕೀಯ ಮುಖಂಡರು, ಪೋಷಕರು ಆಕ್ರೋಶ ವ್ಯಕ್ತಪಡಿಸಿ ಶಿಕ್ಷಕಿ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದರು.

   

Related Articles

error: Content is protected !!