ಕೋಟ : ಕೋಟದ ಸಾಲಿಗ್ರಾಮ ಮಕ್ಕಳ ಮೇಳವು ತನ್ನ ಐವತ್ತರ ಸಂಭ್ರಮಾಚರಣೆಯ ಸುವರ್ಣ ಪರ್ವದ ಮೂರನೆಯ ಕಾರ್ಯಕ್ರಮವನ್ನು ಗಿರಿಜಾ ಶಂಕರನಾರಾಯಣ ಮಧ್ಯಸ್ಥ ಚಾರಿಟೇಬಲ್ ಟ್ರಸ್ಟ್ ಪಾರಂಪಳ್ಳಿ, ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಕಾರ್ಕಡ ಗೆಳೆಯರ ಬಳಗದ ಜಂಟಿ ನೆರವಿನೊಂದಿಗೆ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಪ್ರಾಂಗಣದಲ್ಲಿ ನ. 23 ಶನಿವಾರದಂದು ಆಯೋಜಿಸಿದೆ.
ಮಕ್ಕಳ ಕ್ಷೇತ್ರದಲ್ಲಿ ಅನುಪಮವಾದ ಕೃಷಿ ಮಾಡಿದ ನಿವೃತ್ತ ಅಧ್ಯಾಪಕ, ಯಕ್ಷ ಗುರು, ಲೇಖಕ, ಹವ್ಯಾಸಿ ಯಕ್ಷಗಾನ ಮತ್ತು ನಾಟಕ ಕಲಾವಿದರಾದ ಮಣೂರಿನ ಎಂ. ಎನ್. ಮಧ್ಯಸ್ಥರಿಗೆ ಮಕ್ಕಳ ಮೇಳದ ಸುವರ್ಣ ಪರ್ವ ಪರಸ್ಕಾರವನ್ನು ನೀಡಿ ಗೌರವಿಸಲಾಗುವುದು.
ಗುರುನರಸಿಂಹ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ.ಎಸ್. ಕಾರಂತರ ಅಧ್ಯಕ್ಷತೆಯಲ್ಲಿ ,ಕನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಉದ್ಘಾಟಿಸಲಿದ್ದಾರೆ. ನಿವೃತ್ತ ಅಂಚೆ ಪಾಲಕ, ಪ್ರಗತಿಪರ ಕೃಷಿಕರಾದ ಪಾರಂಪಳ್ಳಿ ಪಿ. ಸದಾಶಿವ ಮಧ್ಯಸ್ಥ, ಕೆನರಾಬ್ಯಾಂಕ್ ನಿವೃತ್ತ ಅಧಿಕಾರಿ ಲಕ್ಷಿö್ಮÃನಾರಾಯಣ ಮಧ್ಯಸ್ಥ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಂಘದ ಮಾಜಿ ಅಧ್ಯಕ್ಷ ಐರೋಡಿ ಜಗದೀಶ ಕಾರಂತ, ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕ ಎಚ್. ಶ್ರೀದರ ಹಂದೆ, ಕೋಟ ಸಿ.ಏ. ಬ್ಯಾಂಕ್ನ ಅಧ್ಯಕ್ಷ ಡಾ ಕೃಷ್ಣ ಕಾಂಚನ್, ಕಾರ್ಕಡ ಗೆಳೆಯರ ಬಳಗ ಅಧ್ಯಕ್ಷ ತಾರಾನಾಥ ಹೊಳ್ಳ , ಸಾಲಿಗ್ರಾಮ ಮಕ್ಕಳ ಮೇಳದ ಕಾರ್ಯಾಧ್ಯಕ್ಷ ಕೆ. ಮಹೆಶ್ ಉಡುಪ, ಅಧ್ಯಕ್ಷ ಬಲರಾಮ ಕಲ್ಕೂರ, ಉಪಾಧ್ಯಕ್ಷ ಜನಾರ್ದನ ಹಂದೆ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.