Home » ಸಾಲ ನೀಡಲು ವಿಳಂಬ ಸಲ್ಲದು : ಕೋಟ
 

ಸಾಲ ನೀಡಲು ವಿಳಂಬ ಸಲ್ಲದು : ಕೋಟ

by Kundapur Xpress
Spread the love

ಉಡುಪಿ : ಕೇಂದ್ರ ಸರಕಾರದ ಯೋಜನೆಗಳಾದ ವಿಶ್ವಕರ್ಮ, ಸ್ವನಿಧಿ, ಮುದ್ರಾ ಯೋಜನೆ, ಸ್ಟಾರ್ಟ್‌ ಅಪ್ ಮೊದಲಾದ ಯೋಜನೆಗಳಿಗೆ ಸಂಬಂಧಿಸಿದಂತೆ ಸಾಲ ನೀಡಲು ಯಾವುದೇ ವಿಳಂಬ ಮಾಡುವುದು ಸರಿಯಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಾಕೀತು ಮಾಡಿದರು.

ಅವರು ಸೋಮವಾರ, ರಜತಾದ್ರಿಯ ಡಾ.ವಿಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಲೀಡ್ ಬ್ಯಾಂಕ್ ಜತೆ ವಿಶ್ವಕರ್ಮ ಸೇರಿದಂತೆ ಮೊದಲಾದ ಕೇಂದ್ರ ಸರಕಾರದ ಸಾಲ ಸೌಲಭ್ಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ 4465 ಮಂದಿ ಸ್ವನಿಧಿಯ ಮೊದಲ ಹಂತದ ಸಾಲವನ್ನು ಪಡೆದಿದ್ದು, ಎರಡನೇ ಮತ್ತು ಮೂರನೇ ಹಂತದ ಸಾಲ ಸೌಲಭ್ಯಕ್ಕಾಗಿ ಕಾಯುತ್ತಿದ್ದಾರೆ. ಎರಡನೇ ಹಂತದ ಸಾಲ ಸೌಲಭ್ಯವನ್ನು 2865 ಮಂದಿ ಪಡೆದಿದ್ದಾರೆ. ಮೂರನೇ ಹಂತದ ಸಾಲ ಸೌಲಭ್ಯವನ್ನು 845 ಮಂದಿ ಪಡೆದಿದ್ದಾರೆ. ಪ್ರಥಮ ಹಂತ ಪಡೆದು ಬಾಕಿ ಉಳಿದಿರುವ ಎಲ್ಲರಿಗೂ ಎರಡನೇ ಮತ್ತು ಮೂರನೇ ಹಂತದ ಸಾಲ ಸೌಲಭ್ಯವನ್ನು ನೀಡಬೇಕೆಂದು ಬ್ಯಾಂಕ್ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಿದರು.

ಈ ಸಂದರ್ಭ ನ.8ರಂದು ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿರುವ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಿ, ಪ್ರತಿ ಬ್ಯಾಂಕಗಳಿಂದ ಕನಿಷ್ಠ 100 ಮಂದಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ಈ ಕಾರ್ಯಕ್ರಮದಲ್ಲಿ ನೀಡಬೇಕೆಂದು ಸೂಚಿಸಿದರು.

   

Related Articles

error: Content is protected !!