ಕುಂದಾಪುರ : ಕುಂದಾಪುರದ ತಾಲೂಕು ಕಚೇರಿಯಲ್ಲಿ ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳನ್ನು ಗಣಕೀಕರಣಗೊಳಿಸುವ ಕಾರ್ಯಕ್ರಮಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟೆಹೊಳೆಯವರು ಜಂಟಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಚಾಲನೆ ನೀಡಿದರು
ಈ ಸಂದರ್ಭದಲ್ಲಿ ಸಹಾಯಕ ಕಮಿಷನರ್ ಮಹೇಶ್ ಚಂದ್ರ ,ಕುಂದಾಪುರ ತಾಲೂಕು ತಹಶೀಲ್ದಾರ್ ಮಲ್ಲಿಕಾರ್ಜುನ, ಉಪ ತಹಶೀಲ್ದಾರ್ ವಿನಯ್ ಹಾಗೂ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು