ಬ್ರಹ್ಮಾವರ : ಬರ ಪರಿಸ್ಥಿತಿ ಮತ್ತು ಕುಡಿಯುವ ನೀರಿನ ಸಮಸ್ಯೆ ಕುರಿತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಯನ್ನು ಬ್ರಹ್ಮಾವರ ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಆಯೋಜಿಸಲಾಗಿದ್ದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ. ಕಿರಣ್ ಕುಮಾರ್ ಕೊಡ್ಗಿಯವರು ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು
ಬ್ರಹ್ಮಾವರ ತಾಲೂಕಿನ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ತಾಲೂಕಿನ ಕುಡಿಯುವ ನೀರು ಸರಬರಾಜು, ಮೆಸ್ಕಾಂ ಸಂಬಂಧಿತ ದೂರುಗಳು, ಹಕ್ಕು ಪತ್ರ , ಜಲ ಜೀವನ್ ಮಿಷನ್, ಅರಣ್ಯ ಇಲಾಖೆಯ ಅಕ್ರಮ ಸಕ್ರಮ ಅರ್ಜಿಗಳು, ಸಗಿತ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಸಮಸ್ಯೆಗಳ ತುರ್ತು ಪರಿಹಾರಕ್ಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬ್ರಹ್ಮಾವರ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಎಚ್ ವಿ ಇಬ್ರಾಹಿಂಪುರ, ಬ್ರಹ್ಮಾವರ ತಹಸೀಲ್ದಾರ ಶ್ರೀಕಾಂತ್ ಹೆಗಡೆ,, ಹಾಗೂ ವಿವಿಧ ಅಧಿಕಾರಿ ವರ್ಗದವರು ಉಪಸಿತರಿದ್ದರು.