ಉಡುಪಿ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಉಡುಪಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ, ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಉಡುಪಿ ವಲಯ ಮತ್ತು ಡಾ. ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಇವರ ಸಹಯೋಗದೊಂದಿಗೆ ಕಿದಿಯೂರು ಹೋಟೆಲ್ ಶೇಷಶಯನ ಹಾಲ್ ನಲ್ಲಿ ಆಯೋಜಿಸಲಾದ “ಡಾll. ಎಸ್. ರಾಧಾಕೃಷ್ಣನ್ ಜನ್ಮ ದಿನಾಚರಣೆ ಉಡುಪಿ ಜಿಲ್ಲಾ ಮತ್ತು ವಲಯ ಮಟ್ಟದ ಶಿಕ್ಷಕರ ದಿನಾಚರಣೆ – 2024” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಅರುಣ್ ಕೆ, ಡಾ. ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕರಾದ ನಾಡೋಜ ಡಾ ಜಿ ಶಂಕರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಉಪಸ್ಥಿತರಿದ್ದರು.
ಉಡುಪಿ ವಲಯ ಮಟ್ಟದ ಶಿಕ್ಷಕರ ದಿನಾಚರಣೆ
170
previous post
