338
ಕುಂದಾಪುರ: ಕುಂದಾಪುರ ರಾಘವೇಂದ್ರ ಶೇರುಗಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪೊಲೀಸ್ ತಂಡವನ್ನು ರಚಿಸಲಾಗಿದ್ದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಅರುಣ್ ರವರು ಡಿವೈಎಸ್ಪಿ ಬೆಳ್ಳಿಯಪ್ಪ ವೃತ್ತ ನಿರೀಕ್ಷಕ ನಂದಕುಮಾರ್ ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಪಿ.ಎಂ.ದಿವಾಕರ್ ನೇತೃತ್ವದಲ್ಲಿ 3 ವಿಶೇಷ ತಂಡಗಳನ್ನು ರಚಿಸಲಾಗಿದ್ದೆ. ಯಾವುದೋ ಪೂರ್ವ ದ್ವೇಷದಿಂದಲೇ ರಾಘವೇಂದ್ರ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಹಾಗೂ ಆರೋಪಿಯು ಶಿವಮೊಗ್ಗ ಮೂಲದವನೆಂದು ಪ್ರಾಥಮಿಕ ತನಿಖೆ ಯಲ್ಲಿ ತಿಳಿದು ಬಂದಿದೆ.

