ಉಡುಪಿ : ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಸಂಪನ್ನಗೊಳ್ಳುತ್ತಿರುವ ಶರನ್ನ ವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ದೀಪ ಬೆಳಗಿಸಿ ಚಾಲನೆ ನೀಡಿದರು.ಗತಕಾಲದ ಕ್ಷೇತ್ರ ಇತಿಹಾಸ ತಿಳಿಸುವಂತೆ ನಾಟ್ಯರಾಣಿ ಗಂಧರ್ವ ಕನ್ಯೆ ದೇವಿಯಿಂದ ಅನುಗ್ರಹಿತಳಾದ ತಾಣದಲ್ಲಿ ಕಲಾವಿದರಿಗೆ ವಿಶೇಷವಾಗಿ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಪ್ರತೀತಿ ಇರುವ ಹಿನ್ನಲೆಯಲ್ಲಿ ಅನೇಕ ಕಲಾವಿದರು ತಮ್ಮ ಕಲಾ ಕಾಣಿಕೆಯನ್ನು ಪರ್ವಕಾಲದಲ್ಲಿ ಸಮರ್ಪಿಸಿ ಅನುಗ್ರಹಕ್ಕೆ ಪಾತ್ರರಾಗುತ್ತಿದ್ದಾರೆ. ಹಾಗಾಗಿ ಕ್ಷೇತ್ರ ಸಾಂಸ್ಕೃತಿಕ ವೈಭವವನ್ನು ಪಡೆದುಕೊಂಡಿದೆ.ಗಾನ ನಾಟ್ಯ ನಾದ ಪ್ರಿಯಲೆಂದು ಪ್ರಖ್ಯಾತಿ ಹೊಂದಿರುವ ಶ್ರೀ ದುರ್ಗಾ ಆದಿಶಕ್ತಿ ದೇವಿಗೆ ಅಭಿಮುಖವಾಗಿ ನೃತ್ಯಾರ್ಥಿಗಳು ತಮ್ಮ ನೃತ್ಯ ಸೇವೆಯನ್ನ ಸಮರ್ಪಿಸಿ ಕೃತಾರ್ಥರಾಗುತ್ತಿದ್ದಾರೆ.ನಾದ ವಾದಕರು ನಾದ ಸೇವೆಯನ್ನು ನೀಡಿ, ಗಾಯಕರು ತಮ್ಮ ಗಾಯನ ಸೇವೆಯನ್ನು ನೀಡಿ ವಿಶೇಷ ಅನುಗ್ರಹವನ್ನು ಪಡೆದುಕೊಳ್ಳುವುದು ಉಲ್ಲೇಖನೀಯ ಸೇವೆ ನೀಡಿದ ಕಲಾವಿದರನ್ನು ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು
ದಕ್ಷಿಣ ಭಾರತದಲ್ಲಿ ಅತಿ ಎತ್ತರವಾದ ಮೇರು ಶ್ರೀ ಚಕ್ರವನ್ನು ಹೊಂದಿರು ವ ಶ್ರೀ ಕ್ಷೇತ್ರದಲ್ಲಿ ತಾರೀಕು 9 ರ ಬುಧವಾರ ಶಷ್ಟಿ ತಿಥಿಯಿಂದ ಮಕ್ಕಳಿಗೆ ಅಕ್ಷರಭ್ಯಾಸಕ್ಕೆ ಚಾಲನೆ ದೊರೆಕಲಿದೆ. ಅಂದು ಬೆಳಿಗ್ಗೆ 11:00 ಯಿಂದ ಅಕ್ಷರಭ್ಯಾಸ ಆರಂಭವಾಗಲಿದೆ. ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.