Home » ತಮಿಳುನಾಡು ಮುಖ್ಯಮಂತ್ರಿ ಶುಕ್ರವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ
 

ತಮಿಳುನಾಡು ಮುಖ್ಯಮಂತ್ರಿ ಶುಕ್ರವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ

by Kundapur Xpress
Spread the love

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಜೂನ್ 12 ರಂದು ಭೇಟಿ ನೀಡಲಿರುವ ತಮಿಳುನಾಡು ಸಿಎಂ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ದೇವಸ್ಥಾನಕ್ಕೆ ಭೇಟಿ ನೀಡಲಿರುವ ವಿಜಯ್ ದೇವಿ ದರ್ಶನ ಪಡೆದು ಸಂಜೆ ಚೆನ್ನೈಗೆ ವಾಪಸಾಗಲಿದ್ದಾರೆ.

ಚೆನ್ನೈನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವ ಸಿಎಂ ವಿಜಯ್, ಬಳಿಕ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಲಿದ್ದಾರೆ.

ಕೊಲ್ಲೂರಿಗೆ ಜೋಸೆಫ್ ವಿಜಯ್ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು, ತಮಿಳುನಾಡು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.

 

Related Articles

error: Content is protected !!