ಕೊಣಾಜೆ : ನಾಟೆಕಲ್ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿಗೆ ಅಪರಿಚಿತ ವ್ಯಕ್ತಿಯೋರ್ವ ಫೋನ್ ಕರೆ ಮಾಡಿ ಬಾಂಬ್ ಬೆದರಿಕೆಯೊಡ್ಡಿದ ಘಟನೆ ಶನಿವಾರ ನಡೆದಿದೆ.
ಬಳಿಕ ಬಾಂಬ್ ನಿಷ್ಕ್ರಿಯ ದಳ, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಇದೊಂದು ಹುಸಿ ಬಾಂಬ್ ಕರೆಯಾಗಿದೆ ಎಂದು ತಿಳಿಸಿದ್ದಾರೆ.
ಕಾಲೇಜಿಗೆ ಬಂದ ಬೆದರಿಕೆ ಕರೆಯ ಬಗ್ಗೆ ಆತಂಕಗೊಂಡ ಆಸ್ಪತ್ರೆಯ ಆಡಳಿತಾಧಿಕಾರಿಗಳು ಪೊಲೀಸರಿಗೆ ಕೂಡಲೇ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಬಾಂಬು ನಿಷ್ಕ್ರಿಯ ದಳ, ಶ್ವಾನದಳ ಆಸ್ಪತ್ರೆ ಹಾಗೂ ಕಾಲೇಜಿಗೆ ಆಗಮಿಸಿ ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ.
ಬುಧವಾರ ಬೆಳಿಗ್ಗೆ 8.15ರ ಹೊತ್ತಿಗೆ ಆಸ್ಪತ್ರೆಯ ಎಲ್ ಟಿ ವಿಭಾಗದ ಸ್ಥಿರ ದೂರವಾಣಿ ಕರೆ ಬಂದಿದ್ದು. ಅದರಲ್ಲಿ ಬೆಳಿಗ್ಗೆ 11.00 ಗಂಟೆಗೆ ಬಾಂಬು ಇಟ್ಟು ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಹಾಗೂ ಎಲ್ಲರನ್ನು ಆಸ್ಪತ್ರೆಯಿಂದ ಹೊರಗೆ ಕಳುಹಿಸುವಂತೆ ಬೆದರಿಕೆ ಹಾಕಿದ್ದರು. ಬಳಿಕ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದ್ದು ಹುಸಿ ಬಾಂಬ್ ಕರೆಯಾಗಿದೆ ಎಂದು ತಿಳಿಸಿದ ಬಳಿಕ ಆಸ್ಪತ್ರೆಯ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾದರು

