Home » ‘ಎನ್‌ಕೌಂಟರ್ ಸ್ಪೆಷಲಿಸ್ಟ್’ ದಯಾ ನಾಯಕ್‌ ಇಂದು ನಿವೃತ್ತಿ
 

‘ಎನ್‌ಕೌಂಟರ್ ಸ್ಪೆಷಲಿಸ್ಟ್’ ದಯಾ ನಾಯಕ್‌ ಇಂದು ನಿವೃತ್ತಿ

ನಿವೃತ್ತಿಗೂ 2 ದಿನ ಮೊದಲು ಎಸಿಪಿ

by Kundapur Xpress
Spread the love

ಮುಂಬೈ : ಪಾತಕಿಗಳಿಗೆ ಎನ್‌ಕೌಂಟರ್‌ ಮೂಲಕ ಬಿಸಿಮುಟ್ಟಿಸಿ ‘ಎನ್‌ಕೌಂಟರ್ ಸ್ಪೆಷಲಿಸ್ಟ್’ ಎಂದೇ ಖ್ಯಾತಿ ಪಡೆದಿದ್ದ, ಕನ್ನಡಿಗ ಮುಂಬೈನ ಹಿರಿಯ ಪೊಲೀಸ್ ಇನ್‌ಸ್ಪೆಕ್ಟ‌ರ್ ದಯಾ ನಾಯಕ್ ಇಂದು ಜುಲೈ .31 ರಂದು ಸೇವೆಯಿಂದ  ನಿವೃ ತ್ತರಾಗಲಿದ್ದಾರೆ. ಅದಕ್ಕೂ 2 ದಿನ ಮುಂಚೆ ಮಹಾರಾಷ್ಟ್ರ ಸರ್ಕಾರ ಅವರಿಗೆ ಎಸಿಪಿ ಹುದ್ದೆಗೆ ಬಡ್ತಿ ನೀಡಿದೆ. ಈ ಬಗ್ಗೆ ದಯಾ ನಾಯಕ್ ಜಾಲತಾಣದಲ್ಲಿ ಬರೆದುಕೊಂಡಿದ್ದು, ಮೊದಲ ಬಾರಿಗೆ ಎಸಿಪಿ ಸಮವಸ್ತ್ರ ಧರಿಸುತ್ತಿದ್ದೇನೆ.  ಇದು ಕೊನೆಯಲ್ಲಿ ಬಂದಿರಬಹುದು. ಇದು ಬಡ್ತಿ ಮಾತ್ರವಲ್ಲದೇ ಜೀವಿತಾವಧಿಯ ಕರ್ತವ್ಯ, ಶಿಸ್ತು ಮತ್ತು ಸಮರ್ಪಣೆ ಗುರುತಿಸುವ ಗೌರವ ಎಂದಿದ್ದಾರೆ.

ದಯಾ ನಾಯಕ್ ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಣ್ಣೆಹೊಳೆಯವರು. ಮುಂಬೈಗೆ ಸ್ಥಳಾಂತರವಾಗಿದ್ದ ಅವರು 1995ರಲ್ಲಿ ಮಹಾರಾಷ್ಟ್ರದ ಜುಹು ಪೊಲೀಸ್ ಠಾಣೆಯಲ್ಲಿ ತಮ್ಮ ಜೀವನ ಆರಂಭಿಸಿದರು. ಅಲ್ಲಿಂದ ಸುದೀರ್ಘ ಮೂರು ದಶಕಗಳ ಕಾಲ ಸಬ್ ಇನ್‌ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಅವರು ಇಂದು ಗುರುವಾರ ನಿವೃತ್ತರಾಗಲಿದ್ದಾರೆ. 

ಖಡಕ್ ಅಧಿಕಾರಿಯಾಗಿದ್ದ ದಯಾ ನಾಯಕ್‌ ತಮ್ಮ ಕರ್ತವ್ಯದ ಅವಧಿಯಲ್ಲಿ 87  ಗ್ಯಾಂಗ್‌ಸ್ಟರ್‌ಗಳ ಶೂಟೌಟ್‌ ಮೂಲಕ ಎನ್‌ಕೌಂಟರ್‌ ಸ್ಪೆಷಲಿಸ್ಟ್ ಎಂದೇ ಖ್ಯಾತಿ ಗಳಿಸಿದ್ದರು

 

Related Articles

error: Content is protected !!