118
ಉಡುಪಿ : ಸರ್ಕಾರದ ಹಲವು ವೈಫಲ್ಯಗಳನ್ನು ಖಂಡಿಸಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 399 ಗ್ರಾಮ ಪಂಚಾಯತ್ ಕಚೇರಿ ಎದುರು ಹಾಗೂ ನಗರ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ಸೋಮವಾರ ಬಿಜೆಪಿ ಪ್ರತಿಭಟನೆ ನಡೆಸಲಿದೆ.
9/11 ನಿವೇಶನಗಳ ಸಮಸ್ಯೆಗಳನ್ನು ಬಗೆಹರಿಸಲು, ಅಕ್ರಮ ಸಕ್ರಮ ಅರ್ಜಿಗಳನ್ನು ತಿರಸ್ಕರಿಸುವುದನ್ನು ವಿರೋಧಿಸಿ, ಆಶ್ರಯ ಮನೆಗಳ ಬಿಡುಗಡೆಗೆ ಒತ್ತಾಯಿಸಿ, ವೃದ್ದಾಪ್ಯ ವೇತನ, ಸಂಧ್ಯ ಸುರಕ್ಷಾ ಪಿಂಚಣಿ ರದ್ದತಿ ಆಕ್ಷೇಪಿಸಿ ಹಾಗೂ ವಿದ್ಯುತ್ ದರ ಏರಿಕೆಯನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಲಿದೆ.
ಜೂ. 23ರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೂ ಎಲ್ಲಾ ಗ್ರಾ.ಪಂ. ಕಚೇರಿ ಮುಂಭಾಗ, ನಗರ ಸಭೆ, ನ.ಪಂ. ಕಚೇರಿಗಳ ಎದುರು ಪ್ರತಿಭಟನೆ ನಡೆಸಲಿದೆ. ಈ ಪ್ರತಿಭಟನೆಯಲ್ಲಿ ಶಾಸಕರು, ಸಂಸದರು, ಗ್ರಾ.ಪಂ. ಅಧ್ಯಕ್ಷರು, ಸದಸ್ಯರು ಭಾಗವಹಿಸಲಿದ್ದಾರೆ.

