ಮಂಗಳೂರು : ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿ-ಚಿಕ್ಕಮಗಳೂರು ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮೇಲ್ಮನೆ ಕ್ಷೇತ್ರಕ್ಕೆ ಇಂದು ಸೋಮವಾರ ಮತದಾನ ನಡೆಯಲಿದೆ. ಚುನಾವಣೆ ಹಿನ್ನಲೆಯಲ್ಲಿ ವ್ಯಾಪಕ ಕ್ರಮವನ್ನು ಕೈಗೊಳ್ಳಲಾಗಿದ್ದು ಇದೇ ತಿಂಗಳ ಆ.24ರಂದು ಫಲಿತಾಂಶ ಪ್ರಕಟವಾಗಲಿದೆ.