Home » ವೆನ್ಹಾಕ್ ಆಸ್ಪತ್ರೆಯ ಐಸಿಯು ಕಟ್ಟಡಕ್ಕೆ ಇಂದು ಪ್ರಧಾನಿ ಮೋದಿ ಶಂಕುಸ್ಥಾಪನೆ
 

ವೆನ್ಹಾಕ್ ಆಸ್ಪತ್ರೆಯ ಐಸಿಯು ಕಟ್ಟಡಕ್ಕೆ ಇಂದು ಪ್ರಧಾನಿ ಮೋದಿ ಶಂಕುಸ್ಥಾಪನೆ

by Kundapur Xpress
Spread the love

ಮಂಗಳೂರು :ಕೇಂದ್ರ ಸರಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಂಗಳವಾರ ನೆರವೇರಿಸಲಿದ್ದಾರೆ.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಟರ್ ಮಿಷನ್ ಯೋಜನೆಯಡಿಯಲ್ಲಿ ಮಂಜೂರಾದ  ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ವೆನ್ಲಾಕ್‌ ಆಸ್ಪತ್ರೆಯ ನೂತನ ಶಸ್ತ್ರಚಿಕಿತ್ಸಾ ವಿಭಾಗದ ಮುಂಭಾಗದಲ್ಲಿರುವ ಅತ್ತಾವರದ ಐ.ಎಂ.ಎ ಭವನದಲ್ಲಿ ಬೆಳಗ್ಗೆ 11.30ಕ್ಕೆ ಆಯೋಜಿಸಲಾಗಿದೆ. ಮಧ್ಯಾಹ್ನ 01.10ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ಈ ಬಹುಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಮಂಗಳೂರಿನಲ್ಲಿ ನಡೆಯುವ ಈ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೇರಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳು ಮುಂತಾದವರು ಭಾಗವಹಿಸಲಿದ್ದಾರೆ ಎಂದು ಸಂಸದರ ಕಾರ್ಯಾಲಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ

   

Related Articles

error: Content is protected !!