188
ಕುಂದಾಪುರ : ಉಡುಪಿ ಜಿಲ್ಲೆಯಲ್ಲಿ ಮಳೆಯ ಅರ್ಭಟ ಮುಂದುವರಿದಿದ್ದು ಗುರುವಾರವೂ ಉತ್ತಮ ಮಳೆ ಸುರಿಯುವ ನಿರೀಕ್ಷೆ ಹೊಂದಲಾಗಿದೆ ಜಿಲ್ಲಾದ್ಯಂತ ಮಳೆಯ ತೀವ್ರತೆ ಹೆಚ್ಚಿರುವುದರಿಂದ ಇಂದು ಜುಲೈ 17 ರಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ
ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ, ಎಂಜಿನಿಯರಿಂಗ್ ಮೊದಲಾದ ತರಗತಿಗಳಿಗೆ ರಜೆ ಇಲ್ಲಾ ಆದರೇ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ಅಗತ್ಯ ಮುನ್ನೆಚ್ಚರಿಕ ಕ್ರಮ ತೆಗೆದುಕೊಳ್ಳಬೇಕು ಎಂದು ಡಿಸಿ ಸ್ವರೂಪಾ ಟಿ.ಕೆ. ತಿಳಿಸಿದ್ದಾರೆ

