Home ಕರಾವಳಿ ಸುದ್ದಿಬಿ. ಬಿ. ಹೆಗ್ಡೆ ಕಾಲೇಜಿನ ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಬಿ. ಬಿ. ಹೆಗ್ಡೆ ಕಾಲೇಜಿನ ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

Trasi Beach Cleaning by NSS Volunteers of B. B. Hegde College

by Kundapur Xpress

ಕುಂದಾಪುರ : ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ ಡಾ. ಬಿ. ಬಿ. ಹೆಗ್ದೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಆಶ್ರಯದಲ್ಲಿ ತ್ರಾಸಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಬೀಚ್ ಕ್ಲೀನಿಂಗ್ ಕಾರ್ಯಕ್ರಮ ಸೆಪ್ಟೆಂಬರ್ 19ರಂದು ನಡೆಯಿತು.
ಈ ಸಂದರ್ಭ ತ್ರಾಸಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾ ಬಿಲ್ಲವ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಶ್ರೀ ರಾಜೇಶ್ ಶೆಟ್ಟಿ ವಕ್ವಾಡಿ, ಪೂಜಾ ಕುಂದರ್, ತ್ರಾಸಿ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಸದಾನಂದ, ಸಂದೀಪ್ ಪೂಜಾರಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರು ಹಾಗೂ ಎಸ್.ಎಲ್.ಆರ್. ಘಟಕದ ಸಿಬ್ಬಂದಿಗಳು ಸಕ್ರಿಯವಾಗಿ ಪಾಲ್ಗೊಂಡರು.

Related Articles

Leave a Comment

This site uses Akismet to reduce spam. Learn how your comment data is processed.