ಉಡುಪಿ : ಉಡುಪಿ ಜಿಲ್ಲಾ ಪಂಚಾಯತ್ ಪಶುಪಾಲನಾ ಹಾಗೂ ಪಶು ವೈದ್ಯ ಸೇವಾ ಇಲಾಖೆ, ಕೋಟೆ ಕಟಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ರೇಬಿಸ್ ಜಾಗೃತಿ ಶಿಬಿರವನ್ನು ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿಯಲ್ಲಿ ಸಪ್ಟೆಂಬರ್ 17 ರಂದು ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಹಿರಿಯ ಪಶು ವೈದ್ಯಾಧಿಕಾರಿ ಡಾ. ವಿಜಯ ಕುಮಾರ್ ಅವರು ಪಿಯುಸಿ ವಿದ್ಯಾರ್ಥಿಗಳಿಗೆ ರೇಬಿಸ್ ರೋಗದ ಅಪಾಯ ಹಾಗೂ ಪರಿಣಾಮಗಳ ಬಗ್ಗೆ ಹೇಳಿದರು.ಜೊತೆಗೆ ಸಾಕು ಪ್ರಾಣಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕುವುದರ ಬಗ್ಗೆ ಮಾಹಿತಿಯನ್ನು ನೀಡಿದರು. ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪ್ರಾಧ್ಯಾಪಕರಾದ ರಂಜನ್ ಇವರು ಕಾರ್ಯಕ್ರಮವನ್ನು ಸಂಯೋಜಿಸಿದರು.