ಮಂಗಳೂರು : ಸಿ.ಎ ಸಿ.ಎಸ್ ಮೊದಲಾದ ವೃತ್ತಿಪರ ಕೋರ್ಸ್‌ಗಳಿಗಾಗಿ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ದ್ವಿತೀಯ ಪಿ.ಯು. ಪರೀಕ್ಷೆ ಮುಗಿಸಿದ ನೂತನ ಸಿ .ಎ. ಫೌಂಡೇಷನ್ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮವನ್ನು ಮಂಗಳೂರಿನ ತ್ರಿಶಾ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಜ್ಯೋತಿ ಬೆಳಗಿಸುವ ಮೂಲಕ ಈ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ ತ್ರಿಶಾ ಸಮೂಹಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ ಎ ಗೋಪಾಲ ಕೃಷ್ಣ ಭಟ್ ಅವರು ಸಿ. ಎ. ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ ಸಿ. ಎ. ಕೋರ್ಸಿನ ಬಗ್ಗೆ ಮತ್ತು ಪರೀಕ್ಷಾಪೂರ್ವ ತಯಾರಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ನಂತರ ತರಗತಿ ನಿಯಮಗಳನ್ನು ವಿವರಿಸಲಾಯಿತು.
ಕಾರ್ಯಕ್ರಮದಲ್ಲಿ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ ಪ್ರಾಂಶುಪಾಲರಾದ ಪ್ರೊ. ಮಂಜುನಾಥ್ ಕಾಮತ್, ತ್ರಿಶಾ ಕ್ಲಾಸಸ್ ಮಂಗಳೂರು ಕೇಂದ್ರದ ಮುಖ್ಯಸ್ಥೆಯಾದ ಪ್ರೊ.ಯಶಸ್ವಿನಿ ಯಶ್ ಪಾಲ್, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆದಿತ್ಯಾ ಜೆ. ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು. ಶರಣ್ಯ ಸುರೇಶ್ ವಂದಿಸಿದರು

