Home ಕರಾವಳಿ ಸುದ್ದಿತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

by Kundapur Xpress

ಕಟಪಾಡಿ: ತ್ರಿಶಾ ಕ್ಲಾಸಸ್ ವತಿಯಿಂದ ಸಿಎ ಫೌಂಡೇಶನ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮವು ಸೆಪ್ಟೆಂಬರ್ 20ರಂದು ಕಾಲೇಜು ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.

ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಿಎ ನಾಗೇಂದ್ರ ಭಟ್ ಅವರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಕುರಿತು ಅಮೂಲ್ಯ ವಿಚಾರಗಳನ್ನು ಹಂಚಿಕೊಂಡು, ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ತ್ರಿಶಾ ಸಂಸ್ಥೆಯ ಟ್ರಸ್ಟಿಗಳಾದ ಶ್ರೀ ರಾಮ್ ಪ್ರಭು, ಅಕಾಡೆಮಿಕ್ ಮ್ಯಾನೇಜರ್ ಶ್ರೀ ಶಾಂತಪ್ರಿಯ, ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ಪ್ರಾಂಶುಪಾಲರಾದ ಡಾ. ಪಿ. ಕುಲದೀಪ್ ವೈ.ಯು., ಹಾಗೂ ತ್ರಿಶಾ ಕ್ಲಾಸಸ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಶ್ರೀಮತಿ ಗೌರಿ ಕಾಮತ್ ಅವರು ಸಿಎ ಫೌಂಡೇಶನ್ ತರಗತಿಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಕುಮಾರಿ ಪ್ರಜ್ಞಾ ರಾವ್ ನಿರೂಪಿಸಿದರು. ವಂದಿಸಿದರು.

Related Articles

Leave a Comment

This site uses Akismet to reduce spam. Learn how your comment data is processed.