Home » ತ್ರಿಶಾ ಕಾಲೇಜು : ವನೋತ್ಸವ ಆಚರಣೆ
 

ತ್ರಿಶಾ ಕಾಲೇಜು : ವನೋತ್ಸವ ಆಚರಣೆ

by Kundapur Xpress
Spread the love

ಕಟಪಾಡಿ : ತ್ರಿಶಾ ವಿದ್ಯಾ ಕಾಲೇಜು, ಕಟಪಾಡಿಯಲ್ಲಿ ವಿಶ್ವ ಪರಿಸರ ಮಾಸದ ಅಂಗವಾಗಿ “ವನೋತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು ಹಾಗೂ ಪರಿಸರದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಪ್ರಸಿದ್ಧ ಪರಿಸರ ತಜ್ಞರಾದ ಶ್ರೀಮತಿ ರೇವತಿ ಕಾಮತ್ ಅವರೊಂದಿಗೆ ವಿಶೇಷ ಸಂವಾದವನ್ನು ಏರ್ಪಡಿಸಲಾಗಿತ್ತು. ಅವರು ತಮ್ಮ ಅನನ್ಯ ಅನುಭವಗಳು ಹಾಗೂ ಪರಿಸರ ಸಂರಕ್ಷಣೆಯ ಆಳವಾದ ತಿಳಿವಳಿಕೆಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡು. ಅವರ ಮಾರ್ಗದರ್ಶನವು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ, ಪರಿಸರದ ಬಗ್ಗೆ ಬದ್ಧತೆ ಬೆಳೆಸುವಲ್ಲಿ ನೆರವಾಗುತ್ತದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿಎ ಗೋಪಾಲಕೃಷ್ಣ ಭಟ್ ಅವರು ವಹಿಸಿ ವಿದ್ಯಾರ್ಥಿಗಳಿಗೆ ಹಸಿರು ಭೂಮಿಯ ಮಹತ್ವವನ್ನು ವಿವರಿಸಿದರು. ಶಿಕ್ಷಣದ ಜೊತೆಗೆ ಪರಿಸರ ಪ್ರೀತಿ ಬೆಳೆಸಿಕೊಳ್ಳುವುದು ನಿಜವಾದ ನಾಗರಿಕತೆಯ ಸಂಕೇತವಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಸಿದ್ಧಾಂತ್ ಪೌಂಡೇಶನ್ ನ ಟ್ರಸ್ಟಿಯಾದ ನಮಿತಾ ಜಿ ಭಟ್ ಮತ್ತು ರಾಮ್ ಪ್ರಭು, ಎಸ್‌ವಿಎಸ್ ನ ಸಂಚಾಲಕರಾದ ಸತ್ಯೇಂದ್ರ ಪೈ ತ್ರಿಶಾಕ್ಲಾಸಸ್ ನ ಕೇಂದ್ರ ಮುಖ್ಯಸ್ಥರಾದ ಡಾ. ವರದರಾಜ್ ಎಸ್, ತ್ರಿಶಾ ವಿದ್ಯಾ ಕಾಲೇಜು ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ನ ಪ್ರಾಂಶುಪಾಲರಾದ ಪ್ರೊಫೆಸರ್ ನಾರಾಯಣ್ ರಾವ್, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ವಿಘ್ನೇಶ್ ಶೆಣೈ , ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಹರಿಪ್ರಸಾದ್ ,ಅಧ್ಯಾಪಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕರಾದ ಪ್ರೊ ಧೀರಜ್‌ಬೆಳ್ಳಾರೆ ಕಾರ್ಯಕ್ರಮವನ್ನು ನಿರೂಪಿಸಿದರು.

 

Related Articles

error: Content is protected !!