140
ಕಟಪಾಡಿ : ತ್ರಿಶಾ ವಿದ್ಯಾ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಅರ್ಚನಾ ಎಸ್ ಶೆಟ್ಟಿ, ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಲ್ಲಿ 594 ಅಂಕಗಳನ್ನು ಪಡೆದು ರಾಜ್ಯಕ್ಕೆ 6ನೇ ರ್ಯಾಂಕ್, ದ್ರಶಿತಾ ಎಚ್ ಪುತ್ರನ್ 591 ಅಂಕಗಳನ್ನು ಗಳಿಸಿ 9ನೇ ರ್ಯಾಂಕ್, ಏಂಜೆಲ್ ಗ್ರೇಸ್ (586) ಅವರಿಗೆಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಶಾಸಕರ ಕಚೇರಿಯಲ್ಲಿ ಸನ್ಮಾನಿಸಿದರು.
ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ತೋರಿದ ಸಾಧನೆಗೆ ಅಭಿನಂದನೆ ಸಲ್ಲಿಸಿದ ಶಾಸಕರು, ಯುವಜನತೆ ಶಿಕ್ಷಣದ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ ಸಿಎ ಗೋಪಾಲಕೃಷ್ಣ ಭಟ್, ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರಿಪ್ರಸಾದ್, ಸಿಬ್ಬಂದಿ, ಪಾಲಕರು ಮತ್ತು ಹಲವಾರು ಗಣ್ಯರು ಉಪಸ್ಥಿತರಿದ್ದರು.

