106
ಉಡುಪಿ : ಜಿಲ್ಲೆಯ ನೇರ ನಡೆ–ನುಡಿಯ ಮಾಜಿ ಶಾಸಕರಾದ ಯು ಆರ್ ಸಭಾಪತಿಯವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ
ನೂತನ ಉಡುಪಿ ಜಿಲ್ಲೆ ರಚನೆಯ ಸಂದರ್ಭದಲ್ಲಿ ಜಿಲ್ಲೆಯ ಇತರ ರಾಜಕೀಯ ಪಕ್ಷಗಳ ಮುಖಂಡರ ಸಹಿತ ಮಾಜಿ ಶಾಸಕ ಯು ಆರ್ ಸಭಾಪತಿ ಅವರ ಶ್ರಮ ಅವಿಸ್ಮರಣೀಯವಾಗಿದೆ
ಅಗಲಿದ ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಶ್ರೀ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ