ಉಡುಪಿ : ನವರಾತ್ರಿ ಪ್ರಯುಕ್ತ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಶ್ರೀ ಶಾರದಾ ಪೂಜೆಯ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಪಕ್ಷದ ಹಿರಿಯ ನಾಯಕ ಕೆ.ಉದಯ ಕುಮಾರ್ ಶೆಟ್ಟಿಯವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಬಿಜೆಪಿ ಜಿಲ್ಲಾ ಘಟಕ ಮತ್ತು ಉಡುಪಿ ನಗರ ಮಂಡಲ ವತಿಯಿಂದ ಕೆ.ಉದಯ ಕುಮಾರ್ ಶೆಟ್ಟಿಯವರಿಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಮತ್ತು ಉಡುಪಿ ನಗರ ಮಂಡಲಾಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವದಲ್ಲಿ ಶಾಲು ಹೊದೆಸಿ ಗೌರವಾರ್ಪಣೆಗೈದು ಹುಟ್ಟು ಹಬ್ಬದ ಶುಭಾಶಯವನ್ನು ಕೋರಲಾಯಿತು.
ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ವಿ.ಹಿಂ.ಪ ಜಿಲ್ಲಾ ಮಹಿಳಾ ಪ್ರಮುಖ್ ಪೂರ್ಣಿಮಾ ಸುರೇಶ್ ನಾಯಕ್, ಬಿಜೆಪಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸುವರ್ಧನ್ ನಾಯಕ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್, ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಅಶೋಕ್ ನಾಯ್ಕ್, ಚಂದ್ರಶೇಖರ್, ಕಲ್ಪನಾ ಸುಧಾಮ, ವಿಜಯಲಕ್ಷ್ಮಿ, ಪ್ರಮುಖರಾದ ರೋಷನ್ ಶೆಟ್ಟಿ, ಕಿಶೋರ್ ಕರಂಬಳ್ಳಿ, ದಿನಕರ ಪೂಜಾರಿ, ಆನಂದ ಸುವರ್ಣ, ಚಂದ್ರಶೇಖರ್ ಪ್ರಭು, ಲಕ್ಷ್ಮೀ ಶೆಟ್ಟಿ, ಮಂಜುಳಾ ಪ್ರಸಾದ್ ಸಹಿತ ಬಿಜೆಪಿ ಜಿಲ್ಲಾ ಮತ್ತು ನಗರ ಮಂಡಲ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು