ಚಿತ್ತೂರಿನ ಶ್ರೀ ನಿವಾಸ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಂಡ್ಸೆ ಭಾಗದಲ್ಲಿ ಸದಾ ಕಾಲ ಸಾರ್ವಜನಿಕ ಸೇವೆಯಲ್ಲಿ ಮುಂಚೂಣಿಯಲ್ಲಿದ್ದ ಸ್ಥಳೀಯ ನಾಯಕ ಹಾಗೂ ನಾಲ್ಕು ಬಾರಿ ಗ್ರಾಮ ಪಂಚಾಯತ್ ನ ಅಧ್ಯಕ್ಷ ಸ್ಥಾನದ ಸಾರ್ವಜನಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದ ಅಡಿಕೆ ಕೊಡ್ಲು ಉದಯ ಕುಮಾರ್ ಶೆಟ್ಟಿಯವರು ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಮಾನ್ಯ ಶಿವ ಮೊಗ್ಗ ಲೋಕ ಸಭಾ ಕ್ಷೇತ್ರದ ಸಂಸದರಾದ ಬಿ. ವೈ ರಾಘವೇಂದ್ರ ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ ಯವರು ಮತ್ತು ಬೈಂದೂರು ಮಂಡಲ ಅಧ್ಯಕ್ಷರಾದ ಶ್ರೀ ಮತಿ ಅನಿತಾ ಆರ್. ಕೆ ಇವರ ಸಮಕ್ಷಮ ಹಾಗೂಮಂಡಲದ ಎಲ್ಲಾ ಪದಾಧಿಕಾರಿಗಳು,ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಸಮಕ್ಷಮ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆ ಗೊಂಡರು.
ಉದಯ ಕುಮಾರ್ ಶೆಟ್ಟಿ ಯವರು ಪ್ರಸ್ತುತ ಆರೋಗ್ಯ ಕ್ಷೇತ್ರದಲ್ಲಿ ದೀರ್ಘ ಕಾಲದ ಆರೋಗ್ಯ ತೊಂದರೆಯಿಂದ ಬಳಲುತ್ತಿರುವವರಿಗೆ ಮನೆಯಲ್ಲಿಯೇ ಆರೈಕೆ ಮಾಡುವ ನಿಟ್ಟಿನಲ್ಲಿ ಇಲಾಖೆ ಹಾಗೂ ಸ್ಥಳೀಯ ವಿವಿಧ ಸಂಘಟನೆಗಳ ಮೂಲಕ ಸಮುದಾಯ ಆಧಾರಿತ ಆರೋಗ್ಯ ಕಾರ್ಯಕ್ರಮದ ಸಲುವಾಗಿ ಸ್ಥಾಪಿಸಲಾದ ನಿರಾಮಯ ಸೊಸೈಟಿಯ ಅಧ್ಯಕ್ಷರಾಗಿ ನಿಯುಕ್ತಿಗೊಂಡಿದ್ದಾರೆ. ಹಾಗೂ ಸ್ಥಳೀಯ ಸಂಸ್ಥೆಗಳ ಬಲವರ್ಧನೆಯ ವಿಚಾರದಲ್ಲಿ ವಂಡ್ಸೆ ಗ್ರಾಮ ಪಂಚಾಯತ್ ಅನುಸರಿಸಿದ ಹಲವು ಉಪಕ್ರಮಗಳು ಹಾಗೂ ವಿಭಿನ್ನ ಕಾರ್ಯಕ್ರಮಗಳ ಯಶಸ್ವಿ ನಲ್ಲಿ ಪಾಲ್ಗೊಂಡು ಸ್ಥಳೀಯ ಜನ ಪ್ರತಿನಿಧಿಯಾಗಿ ತಮ್ಮ ಅಪಾರ ಕೊಡುಗೆಯನ್ನು ಸಲ್ಲಿಸಿತ್ತಾರೆ.ಆ ಮೂಲಕ ವಂಡ್ಸೆ ಭಾಗದಲ್ಲಿ ಜನಾನುರಾಗಿ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.
4 ಬಾರಿ ಗ್ರಾಮ ಪಂಚಾಯತ್ ಅಧ್ಯಕ್ಷ ಗಾದಿಗೆ ಏರಿದ್ದ ವಂಡ್ಸೆ ಭಾಗದ ಪ್ರಮುಖ ಉದಯ ಕುಮಾರ್ ಶೆಟ್ಟಿ ಅಡಿಕೆ ಕೊಡ್ಲು ಬಿಜೆಪಿ ಗೆ ಸೇರ್ಪಡೆ
Udaya Kumar Shetty Adike Kodlu, a prominent leader from Vandse who served four terms as Gram Panchayat President, joins BJP
42
