ಉಡುಪಿ : ಭಾರತೀಯ ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಏಕಾತ್ಮ ಮಾನವತಾ ವಾದದ ಪ್ರತಿಪಾದಕರು, ಅಂತ್ಯೋದಯ ಪರಿಕಲ್ಪನೆಯನ್ನು ನಾಡಿಗೆ ನೀಡಿದ ಮಹಾನ್ ಚೇತನ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮ ದಿನಾಚರಣೆಯನ್ನು ಬಿಜೆಪಿ ಅಂಬಲಪಾಡಿ ಬೂತ್ 178 ರ ವತಿಯಿಂದ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿಯವರ ನಿವಾಸದಲ್ಲಿ ಆಚರಿಸಲಾಯಿತು.
ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ತತ್ವಾದರ್ಶಗಳು ಮತ್ತು ಜೀವನ ಮೌಲ್ಯಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಯೋಗೀಶ್ ಶೆಟ್ಟಿ, ಪ್ರಮುಖರಾದ ಶರತ್ ಶೆಟ್ಟಿ, ಅನಿಲ್ ರಾಜ್ ಅಂಚನ್, ವಿನೋದ್ ಪೂಜಾರಿ, ನಿತಿನ್ ಕುಮಾರ್, ಪ್ರವೀಣ್ ಶೆಟ್ಟಿ ಅಂಬಲಪಾಡಿ ಮುಂತಾದವರು ಉಪಸ್ಥಿತರಿದ್ದರು.