ಪಡುಬಿದ್ರಿ – ಪಾದೆಬೆಟ್ಟು ಕೇಂದ್ರದ ಸಭೆ ಪಡುಬಿದ್ರಿಯಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿದ ಶಾಸಕರು ಮಾತನಾಡಿ ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ನಾವೆಲ್ಲರೂ ಜಾತಿ, ಧರ್ಮ ಎಂಬ ಬೇದ ಭಾವವನ್ನು ಮರೆತು ಸಂಘಟಿತರಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ್ ಪೂಜಾರಿಯವರನ್ನು ದಾಖಲೆಯ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಕೈ ಬಲಪಡಿಸೋಣ ಎಂದರು.ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಮಟ್ಟು, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಮರುಳಿಧರ್ ಪೈ, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ, ಪ್ರಧಾನ ಕಾರ್ಯದರ್ಶಿಗಳಾದ ಬಾಲಕೃಷ್ಣ ದೇವಾಡಿಗ, ಪಾದೆಬೆಟ್ಟು ಶಕ್ತಿ ಕೇಂದ್ರ ಸಂಚಾಲಕರಾದ ರವಿ ಶೆಟ್ಟಿ, ಸಹ ಸಂಚಾಲಕರಾದ ಶರತ್ ಶರ್ಮ, ಪಡುಬಿದ್ರಿ ಶಕ್ತಿ ಕೇಂದ್ರದ ಸಂಚಾಲಕರಾದ ಶಶಿಕಾಂತ್ ಪಡುಬಿದ್ರಿ, ನೀತಾ ಗುರುರಾಜ್, ಪಡುಬಿದ್ರಿ ಸಹ ಸಂಚಾಲಕರಾದ ಪ್ರಸಾದ್ ಬೀಡು, ಜಯ ಸಾಲ್ಯಾನ್, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.