Home ಕರಾವಳಿ ಸುದ್ದಿವಿಧಾನಸೌಧದಲ್ಲಿ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ

ವಿಧಾನಸೌಧದಲ್ಲಿ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ

Udupi district progress review meeting held at Vidhana Soudha

by Kundapur Xpress

ಬೆಂಗಳೂರು: ಸೆಪ್ಟೆಂಬರ್ 30 ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಹರ್ಷದ್ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಈ ಸಭೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿ ಜಿಲ್ಲೆಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ವಿಚಾರಗಳು, ಕುಡಿಯುವ ನೀರು, ರಸ್ತೆ, ಪ್ರವಾಸೋದ್ಯಮ ಮತ್ತು ಅತಿ ಕಡಿಮೆ ಮಳೆ ಆಗಿರುವುದರಿಂದ ಬರಪೀಡಿತ ಪ್ರದೇಶವೆಂದು ಘೋಷಣೆ ಪರಿಹಾರ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಭಾಗವಹಿಸಿ ಕ್ಷೇತ್ರದ ವಿವಿಧ ಸಮಸ್ಯೆಗಳ ಜೊತೆಯಲ್ಲಿ
ಕುಂದಾಪುರ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಯೋಜನೆಯಡಿ ಅಂತಿಮಗೊಂಡಿದ್ದ 75 ಅರ್ಜಿಗಳ ಪೈಕಿ 30 ಕಡತಗಳು ನಾಪತ್ತೆಯಾಗಿದ್ದು ಈವರೆಗೆ 11 ಮಂದಿಗಷ್ಟೇ ಹಕ್ಕುಪತ್ರ ನೀಡಲಾಗಿದೆ ಕಳೆದ ಮೂರು ವರ್ಷಗಳಿಂದ ಅರ್ಜಿಗಳು ಬಾಕಿ ಉಳಿದಿರುವ ಸಮಸ್ಯೆಗಳ ಬಗ್ಗೆ
ಕುರಿತು ಸಚಿವರ ಗಮನ ಸೆಳೆದರು.

ಈ ಸಭೆಯಲ್ಲಿ ಉಡುಪಿ ಜಿಲ್ಲೆಯ ಶಾಸಕರುಗಳಾದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ,ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ,ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ,ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Comment

This site uses Akismet to reduce spam. Learn how your comment data is processed.