233
ಉಡುಪಿ : ಉಡುಪಿ ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡಿಗೆ ನಡೆಯುವ ಉಪ ಚುನಾವಣೆಯ ಪ್ರಯುಕ್ತ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡಾ ಡಿ’ಸೋಜಾ ಪರವಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನೆ ಮನೆಗೆ ತೆರಳಿ ಚುನಾವಣಾ ಪ್ರಚಾರ ಅಭಿಯಾನದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ನಗರಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಗಿರೀಶ್ ಎಮ್. ಅಂಚನ್, ಮಾಜಿ ನಗರಸಭಾ ಸದಸ್ಯೆ ಅರುಣಾ ಪೂಜಾರಿ, ಸ್ಥಳೀಯ ಪ್ರಮುಖರಾದ ಸುಮಾ ಪೂಜಾರಿ, ಸಂತೋಷ್ ಅಮೀನ್, ಮಣಿoದರ್ ಮತ್ತಿತರರು ಉಪಸ್ಥಿತರಿದ್ದರು.

