Home » ಗ್ಯಾರೆಂಟಿ ಯೋಜನೆಗಳಿಂದ ರಾಜ್ಯದ ಜಿಡಿಪಿ ಏರಿಕೆ
 

ಗ್ಯಾರೆಂಟಿ ಯೋಜನೆಗಳಿಂದ ರಾಜ್ಯದ ಜಿಡಿಪಿ ಏರಿಕೆ

ಲಕ್ಷ್ಮೀ ಹೆಬ್ಬಾಳ್ಕರ್

by Kundapur Xpress
Spread the love

ಉಡುಪಿ : ಕೇಂದ್ರ ಸರ್ಕಾರದ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಇಲಾಖೆಯ ಆರ್ಥಿಕ ಪ್ರಗತಿ ವರದಿಯಲ್ಲಿ ಕರ್ನಾಟಕ ರಾಜ್ಯದ ಜಿಡಿಪಿ ದರ ಶೇ.10.20 ರಷ್ಟು ದಾಖಲಾಗಿದೆ. ಇದು ದೇಶದ ಒಟ್ಟಾರೆ ಜಿಡಿಪಿ ದರಕ್ಕಿಂತ ಹೆಚ್ಚು ಪ್ರಗತಿಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕೊಡುಗೆ ಗಣನೀಯವಾಗಿದೆ. ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಪ್ರಗತಿಗೆ ಬಲ ತುಂಬಿವೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಹೇಳಿದರು

ಅವರು ಶುಕ್ರವಾರ ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವದಂಗವಾಗಿ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಿದರು. ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗುತ್ತದೆ ಎಂದು ನಿರೀಕ್ಷಿಸಿದವರಿಗೆ ನಿರಾಸೆಯಾಗಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಫಲಾನುಭವಿಯ ಕುಟುಂಬಕ್ಕೆ ತಿಂಗಳಿಗೆ ಸರಾಸರಿ  4 ಸಾವಿರದಿಂದ 5 ಸಾವಿರ ರು.ಗಳ ಆರ್ಥಿಕ ನೆರವು ಲಭಿಸುತ್ತಿದೆ ಎಂದರು

   

Related Articles

error: Content is protected !!