ಉಜ್ಜಯಿನಿ : ಇಲ್ಲಿನ ಪ್ರಸಿದ್ಧ ಮಹಾಕಾಲ ದೇಗುಲದ ಗರ್ಭಗುಡಿಯಲ್ಲಿ ಹೋಳಿಹುಣ್ಣಿಮೆಯ ದಿನವಾದ ಸೋಮವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 14 ಅರ್ಚಕರು ಮತ್ತು ಅವರ ಆಪ್ತರು ಗಾಯಗೊಂಡಿದ್ದು, ಅವರನ್ನೆಲ್ಲಾ ಉಜ್ಜಯಿನಿ ಮತ್ತು ಇಂದೋರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ
ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಮೊದಲಾದವರು ತೀವ್ರ ದಿಗ್ದಮೆ ವ್ಯಕ್ತಪಡಿಸಿದ್ದು, ಗಾಯಾಳುಗಳ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ. ಅಲ್ಲದೆ ಗಾಯಾಳುಗಳ ಕುಟುಂಬಕ್ಕೆ ತಲಾ 1 ಲಕ್ಷ ರು. ಪರಿಹಾರವನ್ನೂ ಘೋಷಿಸಲಾಗಿದೆ. ಮತ್ತೊಂದೆಡೆ ಘಟನೆ ಕುರಿತು ತನಿಖೆಗೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ.