ಉಡುಪಿ :ಭಾರತೀಯ ಜನತಾ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಶ್ರೀ ಕೆ ರಘುಪತಿ ಭಟ್ ಅವರ ಕಾರ್ಯ ವೈಖರಿ, ಜನಪರ ಕಾಳಜಿ ಹಾಗೂ ಕ್ಷೇತ್ರದಾದ್ಯಂತ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಇಂದ್ರಾಳಿ ವಾರ್ಡಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ಉಮೇಶ್ ಪೂಜಾರಿ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಭಾರತೀಯ ಜನತಾ ಪಕ್ಷದ ಶಾಲನ್ನು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ಅಶೋಕ್ ನಾಯ್ಕ್ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು