Home » ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಪರೀಕ್ಷೆ : ನಿಷೇಧಾಜ್ಞೆ ಜಾರಿ
 

ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಪರೀಕ್ಷೆ : ನಿಷೇಧಾಜ್ಞೆ ಜಾರಿ

by Kundapur Xpress
Spread the love

ಉಡುಪಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ  ನಡೆಯುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ಸಂಬಂಧಿಸಿದಂತೆ  ನಡೆಯುವ ಸ್ಪಧಾತ್ಮಕ ಪರೀಕ್ಷೆ ಜಿಲ್ಲೆಯಲ್ಲಿ ಒಟ್ಟು 15 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಗುಂಪು ಸೇರುವುದು ಅಥವಾ ತಿರುಗಾಡುವುದು, ಅನುಮಾನಾಸ್ಪದ ವ್ಯಕ್ತಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರ ಪ್ರಕಟಣೆ ತಿಳಿಸಿದೆ.

   

Related Articles

error: Content is protected !!