219
ಕರ್ನಾಟಕ ಸರಕಾರದ ಸಚಿವರು ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ ವಿ.ಸುನೀಲ್ ಕುಮಾರ್ ನಾಳೆ ಬೆಳಿಗ್ಗೆ 10 ಗಂಟೆಗೆ ನಾಮಪತ್ರವನ್ನು ಸಲ್ಲಿಸಲಿದ್ದಾರೆ ನಾಳೆ ಬೆಳಿಗ್ಗೆ ಸ್ವರಾಜ್ ಮೈದಾನದಿಂದ ಕಾರ್ಕಳ ಬಸ್ಸು ನಿಲ್ದಾಣದ ಬಂಡಿಮಠ ಮಾರ್ಗವಾಗಿ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ತಾಲೂಕು ಕಚೇರಿಗೆ ಬಂದು ಚುನಾವಣಾ ಅಧಿಕಾರಿಯ ಮೂಲಕ ನಾಮಪತ್ರವನ್ನು ಸಲ್ಲಿಸಲಿದ್ದಾರೆ ನಂತರ ಕುಕ್ಕುಂದೂರು ಗ್ರಾಮ ಪಂಚಾಯತ್ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

