ಕೋಟ: ವಡ್ಡರ್ಸೆ ಗ್ರಾಮಪಂಚಾಯತ್ ವ್ಯಾಪ್ತಿಯ ಎಂ.ಜಿ.ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಕ್ರಮ ಮಂಗಳವಾರ ನಡೆಯಿತು. ವಡ್ಡರ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಯಶೋಧ ಹಂದಟ್ಟು, ಸಮುದಾಯ ಆರೋಗ್ಯ ಅಧಿಕಾರಿ ಮಮತಾ ಮಳೆಗಾಲದಲ್ಲಿ ಹೆಚ್ಚಾಗಿ ಹರಡುವ ಖಾಯಿಲೆಗಳ ಬಗ್ಗೆ ಮುಂಜಾಗೃತ ಕ್ರಮಗ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಡ್ಡರ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್ ಕಾಂಚನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್, ಪಂಚಾಯತ್ ಸದಸ್ಯರಾದ ಕೆ. ಪಿ. ಕೋಟಿ ಪೂಜಾರಿ, ಜಯಲಕ್ಮೀ, ಪಾರ್ವತಿ ದೇವಾಡಿಗ, ,ಆಶಾ ಕಾರ್ಯಕರ್ತೆಯರಾದ ಪರಿಮಳ, ಗುಲಾಬಿ,ಅಂಗನವಾಡಿ ಕಾರ್ಯಕರ್ತೆ ಅನಿತಾ,ಸಹಾಯಕಿ ಸೌಲತ್, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.