ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ಮತ್ತು ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ದೇಶ ಕಂಡ ಅಪ್ರತಿಮ ನಾಯಕ,ಅಜಾತಶತ್ರು ದಿವಂಗತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಥೈಲ್ಯಾಂಡ್ ಯೂತ್ ಯೋಗ ಅಸೋಸಿಯೇಷನ್ ಮತ್ತು ವರ್ಲ್ಡ್ ಯೂಥ್ ಯೋಗ ಫೆಡರೇಶನ್ ಹಾಗೂ ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ರಿಜಿಸ್ಟರ್ಡ್ ಶಿವಮೊಗ್ಗ ಕರ್ನಾಟಕ ಇವರ ಸಹಭಾಗಿತ್ವದಲ್ಲಿ ದಿನಾಂಕ 09/12/2024 ಸೋಮವಾರದಂದು ಥೈಲ್ಯಾಂಡ್ ದೇಶದ ಪಟ್ಟಾಯದಲ್ಲಿ ನಡೆದ 6ನೇ ವರ್ಷದ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿ, ಭಾರತ ದೇಶದಿಂದ 11 ರಿಂದ 15 ವರ್ಷದ ವಯಸ್ಸಿನ ವಿಭಾಗದಲ್ಲಿ ಪ್ರತಿನಿಧಿಸಿ, ಚಿನ್ನದ ಪದಕ ಪಡೆದು ಪ್ರಥಮ ಸ್ಥಾನ ಪಡೆದಿರುವ ಧನ್ವಿ ಪೂಜಾರಿ ಮರವಂತೆ, ಬೆಳ್ಳಿ ಪದಕ ಪಡೆದಿರುವ ಸುಷ್ಮಾ ತೆಂಡೂಲ್ಕರ್ ಹಾಗೂ ಅನನ್ಯ ಇವರನ್ನು ಗುರುತಿಸಿ ಸನ್ಮಾನಿಸಲಾಯಿತು
ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಮತ್ತು ಜಿಲ್ಲಾ ಮಹಿಳಾ ಮೋರ್ಚಾ ಪ್ರಭಾರಿ ರಾಘವೇಂದ್ರ ಕುಂದರ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯೆಕ್ಷೆ ಸಂದ್ಯಾ ರಮೇಶ್ ಮತ್ತು ಶ್ಯಾಮಲ ಕುಂದರ್ ಉಪಸ್ಥಿತರಿದ್ದರು. ಸಂದ್ಯಾ ರಮೇಶ್ ಸ್ವಾಗತಿಸಿ, ಅನಿತಾ ಆರ್ ಕೆ ವಂದಿಸಿದರು.