ಕೋಟೇಶ್ವರ : ಶ್ರೀ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಹಾಗೂ ಲಯನ್ಸ್ ಕ್ಲಬ್ ಕೋಟೇಶ್ವರ ಇವರ ಜಂಟಿ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಕಾಲೇಜಿನ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಸಸಿ ನೆಡುವುದರ ಮೂಲಕ ಚಾಲನೆ ಗೈದ ಕೋಟೇಶ್ವರ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ಪ್ರೇಮಲತಾ ದಿನಕರ್ ಮಾತನಾಡಿ ಪರಿಸರ ಉಳಿಸಿ ಬೆಳೆಸುವ ಕಾರ್ಯವನ್ನು ನಮ್ಮಂತ ಸಂಘ-ಸಂಸ್ಥೆಗಳು ನಡೆಸಿದಾಗ ಇತರರಿಗೆ ಸ್ಪೂರ್ತಿಯಾಗಿ ಜನರಲ್ಲಿ ಪರಿಸರ ಜಾಗೃತಿ ಮೂಡುವಂತಾಗುತ್ತದೆ ತನ್ಮೂಲಕ ಉತ್ತಮ ವಾತಾವರಣವನ್ನು ನಿರ್ಮಾಣ ಮಾಡಬಹುದು ಎಂದರು ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ನಾಗರಾಜ ವೈದ್ಯರು ವಿದ್ಯಾರ್ಥಿಗಳಿಗೆ ವನಮಹೋತ್ಸವದ ಪ್ರಾಮುಖ್ಯತೆಯನ್ನು ತಿಳಿಸಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳಸಿ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡುವಂತಾಗಬೇಕು ಎಂದರು, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಯೋಜನಾಧಿಕಾರಿಗಳಾದ ಶ್ರೀಮತಿ ವೈಶಾಲಿ ಯಡಿಯಾಳವರು ಕೋಟೇಶ್ವರ ಲಯನ್ಸ್ ಕ್ಲಬ್ ಸದಸ್ಯರು ಕಾಲೇಜಿನ ಬೋಧಕ, ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು

