ಮಂಗಳೂರು : ಮಂಗಳೂರು ಮಂಗಳಾದೇವಿ ಕ್ಷೇತ್ರದ ನವರಾತ್ರಿ ಉತ್ಸವಕ್ಕೆ ಆಗಮಿಸುವ ಭಕ್ತರು ಕೇಸರಿ ಧ್ವಜವಿದ್ದ ಅಂಗಡಿಗಳಲ್ಲಿ ಮಾತ್ರವೇ ವ್ಯಾಪಾರ ನಡೆಸುವಂತೆ ವಿಶ್ವ ಹಿಂದೂ ಪರಿಷತ್ ವಿನಂತಿಸಿದೆ ಮಂಗಳಾದೇವಿ ದೇವಸ್ಥಾನದಲ್ಲಿ ಜಿಲ್ಲಾ ಆಡಳಿತ ಎರಡನೇ ಬಾರಿ ಏಲಂ ಕಳೆದು ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಿರುವುದು ಸರಿಯಲ್ಲ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕಾನೂನಿನ ಅನ್ವಯ ರಥವಬೀದಿಯಲ್ಲಿ ವ್ಯಾಪಾರಕ್ಕೆ ಅವಕಾಶ ಇಲ್ಲ ಬಡ ಹಿಂದು ವ್ಯಾಪಾರಸ್ಥರು ಜಾತ್ರೆ ವ್ಯಾಪಾರ ನಂಬಿ ತಮ್ಮ ಜೀವನ ಸಾಗಿಸುತ್ತಿದ್ದಾರೆ ಹಾಗಾಗಿ ಕೇಸರಿ ಧ್ವಜ ಹಾಕಿರುವ ಅಂಗಡಿಯಲ್ಲಿ ವ್ಯಾಪಾರ ಮಾಡುವಂತೆ ವಿಶ್ವ ಹಿಂದು ಪರಿಷತ್ ಮಂಗಳೂರು ಜಿಲ್ಲಾಧ್ಯಕ್ಷ ಎ ಚ್‍ಕೆ ಪುರುಷೋತ್ತಮ್ ರವರು ವಿನಂತಿಸಿದ್ದಾರೆ