215
ಉಡುಪಿ : ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ನಡೆದ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ಚುರುಕುಗೊಂಡಿದೆ ಪ್ರಾರಂಭದಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದ ಪೊಲೀಸ್ ಇಲಾಖೆ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಪ್ರತಿಭಟನೆಯ ಬಳಿಕ ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿತು ಸದ್ಯ ಪೊಲೀಸ್ ಇಲಾಖೆಯಿಂದ ಪ್ರಕರಣವನ್ನು ಸಿಐಡಿ ಗೆ ವರ್ಗಾವಣೆಯಾಗಿದೆ ನಿನ್ನೆ ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡ ತನಿಖೆಯನ್ನು ಚುರುಕುಗೊಳಿಸಿದ್ದು ಬೆಳಿಗ್ಗೆ ಪ್ಯಾರಾಮೆಡಿಕಲ್ ಕಾಲೇಜಿಗೆ ತೆರಳಿ ಕಾಲೇಜಿನ ಆಡಳಿತ ಮಂಡಳಿಯಿಂದ ಮಾಹಿತಿಯನ್ನು ಕಲೆಹಾಕಿತು ಚಿತ್ರೀಕರಣಗೊಳಿಸಿದ 3 ಮೊಬೈಲ್ ಗಳನ್ನು ಎಫ್ ಎಸ್ ಎಲ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ವರದಿ ಬಂದ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ

