ಬೆಂಗಳೂರು : ದಿನಾಂಕ 13-10-2023 ರಂದು ಬೆಂಗಳೂರಿನ ವಿಧಾನಸೌಧದ ಮೊದಲನೇ ಮಹಡಿಯಲ್ಲಿ ನಡೆದ “ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ ಸಭೆ” ಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಸಭೆಯಲ್ಲಿ “ವಸತಿ ಇಲಾಖೆಯ” ಅಧೀನದಲ್ಲಿನ ಮಂಡಳಿ,ನಿಗಮ, ನಿಯಮಿತ,ಪ್ರಾಧಿಕಾರ ಇವುಗಳ ಬಾಕಿ ಇರುವ ವಾರ್ಷಿಕ ಮತ್ತು ಲೆಕ್ಕಪರಿಶೋಧನಾ ವರದಿಗಳನ್ನು ವಿಧಾನಮಂಡಲಕ್ಕೆ ಸಲ್ಲಿಸದಿರುವ ಅಥವಾ ಸಲ್ಲಿಸುವಲ್ಲಿ ಆಗಿರುವ ವಿಳಂಬದ ಬಗ್ಗೆ ಮುಖ್ಯಸ್ಥರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು