ಕಾಪು : ಬೆಂಗಳೂರಿನ ವಿಧಾನಸೌಧದ ಮೊದಲನೇ ಮಹಡಿಯಲ್ಲಿ ನಡೆದ “ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ತೋಟಗಾರಿಕೆ ಇಲಾಖೆಯ ಅಧೀನದಲ್ಲಿನ ವಿಶ್ವವಿದ್ಯಾಲಯ ನಿಗಮ ಮಂಡಳಿಗಳ ಬಾಕಿಯಿರುವ ವಾರ್ಷಿಕ ಮತ್ತು ಲೆಕ್ಕಪರಿಶೋಧನಾ ವರದಿಗಳನ್ನು ವಿಧಾನಮಂಡಲಕ್ಕೆ ಸಲ್ಲಿಸದಿರುವ ಅಥವಾ ಸಲ್ಲಿಸುವಲ್ಲಿ ಆಗಿರುವ ವಿಳಂಬದ ಕುರಿತು ಇಲಾಖಾ ಮುಖ್ಯಸ್ಥರು ಅಧಿಕಾರಿಗಳಿಂದ ಮಾಹಿತಿಪಡೆಯಲಾಯಿತು