ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯಡಿ ಬರುವ ವಸತಿ ಶಾಲೆಗಳಲ್ಲಿ ‘ಜ್ಞಾನದೇಗುಲವಿದು ಕೈ ಮುಗಿದು ಒಳಗೆ ಬನ್ನಿ’ ಎಂಬ ಘೋಷವಾಕ್ಯ ವನ್ನು ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಿಸಿರುವುದನ್ನು ಖಂಡಿಸಿ ಉಭಯ ಸದನಗಳಲ್ಲಿ ಬಿಜೆಪಿ ಸದಸ್ಯರು .ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸೋಮವಾರ ಶೂನ್ಯವೇಳೆಯಲ್ಲಿ ಉಭಯ ಸದನಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಹೊರಡಿಸಿದೆ ಎನ್ನಲಾದ ಸುತ್ತೋಲೆಯನ್ನು ಬಿಜೆಪಿ ಸದಸ್ಯರು ಪ್ರಸ್ತಾಪಿಸಿ, ಸರ್ಕಾರ ಈಗಲೇ ಉತ್ತರ ಕೊಡಬೇಕೆಂದು ಪಟ್ಟು ಹಿಡಿದರು. ಇದರಿಂದ ಸಾಕಷ್ಟು ವಾಗ್ವಾದ, ಮಾತಿನ ಚಕಮಕಿಗಳು ನಡೆದವು. ವಿಧಾನ ಪರಿಷತ್ತಿನಲ್ಲಿ ಸರ್ಕಾರದ ‘ಉತ್ತರಕ್ಕೆ ಸದಸ್ಯರು ಸಭಾಪತಿಗಳ ಮುಂದೆ ಆಗ್ರಹಿಸಿದ ಘಟನೆ ನಡೆಯಿತು